ವಾಷಿಂಗ್ಟನ್: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಅಸ್ಟಿನ್ ||| ಅವರು ಭಾರತ ಸೇರಿ ನಾಲ್ಕು ದೇಶಗಳ ಪ್ರವಾಸವನ್ನು ಮುಂದಿನ ವಾರದಿಂದ ಕೈಗೊಳ್ಳಲಿದ್ದಾರೆ ಎಂದು ಅಮೆರಿಕದ ರಕ್ಷಣ ಸಚಿವಾಲಯ ಮಾಹಿತಿ ನೀಡಿದೆ.
ಮೊದಲು ಅವರು ಜಪಾನ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಜಪಾನ್ ರಕ್ಷಣಾ ಸಚಿವ ಯಸುಕಸು ಹಮದಾ ಹಾಗೂ ಇನ್ನಿತರ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ. ಅಲ್ಲಿರುವ ಅಮೆರಿಕ ಸೇನೆಯನ್ನೂ ಭೇಟಿ ಮಾಡಲಿದ್ದಾರೆ.
ಬಳಿಕ ಸಿಂಗಪುರಕ್ಕೆ ಪ್ರಯಾಣ ಬೆಳೆಸಲಿರುವ ಅವರು, ಅಲ್ಲಿನ ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಲಿರುವವರು. ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವದ ಬಗ್ಗೆ ಚರ್ಚೆ ನಡೆಯಲಿದೆ.
ತದನಂತರ ಭಾರತಕ್ಕೆ ಭೇಟಿ ನೀಡಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇನ್ನಿತರ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವವನ್ನು ಆಧುನೀಕರಣಗೊಳಿಸುವ ಬಗ್ಗೆ ಮಾತುಕತೆ ನಡೆಯಲಿದೆ.
ಬಳಿಕ ಅವರು ಫ್ರಾನ್ಸ್‌ಗೆ ತೆರಳಲಿದ್ದಾರೆ.
ಮನವಿ:ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.