HEALTH TIPS

ನಿಷೇಧ ತೆರವು ಬಳಿಕವೂ ಬಂಗಾಳದಲ್ಲಿ ಪ್ರದರ್ಶನ ಕಾಣದ 'ದಿ ಕೇರಳ ಸ್ಟೋರಿ'

                 ಕೋಲ್ಕತ್ತ : ಚಲನಚಿತ್ರ ಮಂದಿರಗಳ ಮಾಲೀಕರ ನಿರಾಸಕ್ತಿಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಇನ್ನೂ 'ದಿ ಕೇರಳ ಸ್ಟೋರಿ' ಚಲನಚಿತ್ರ ಪ್ರದರ್ಶನ ಕಂಡಿಲ್ಲ.

                ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತದೆ ಎಂಬ ಕಾರಣ ನೀಡಿ ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರವು ಚಿತ್ರ ಪ್ರದರ್ಶನದ ಮೇಲೆ ನಿಷೇಧ ಹೇರಿತ್ತು.

         ಆದರೆ, ಸುಪ್ರೀಂ ಕೋರ್ಟ್‌ ಗುರುವಾರ ನಿಷೇಧ ತೆರವುಗೊಳಿಸಿತ್ತು. ನ್ಯಾಯಾಲಯದ ಆದೇಶದ ಹೊರತಾಗಿಯೂ ಚಿತ್ರ ಮಂದಿರಗಳಲ್ಲಿ ಈ ಚಿತ್ರ ಪ್ರದರ್ಶನ ಕಂಡಿಲ್ಲ.

                 'ರಾಜ್ಯದಲ್ಲಿನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಚಿತ್ರ ಮಂದಿರಗಳ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಆಸಕ್ತಿ ತೋರುತ್ತಿಲ್ಲ' ಎಂದು ವಿತರಕ ಸತದೀಪ್‌ ಸಹಾ ಶನಿವಾರ ತಿಳಿಸಿದ್ದಾರೆ.

                   'ರಾಜ್ಯದಲ್ಲಿ ಚಲನಚಿತ್ರ ಪ್ರದರ್ಶಿಸದಂತೆ ತಮಗೆ ಕೆಲವರು ಬೆದರಿಕೆ ಹಾಕಿರುವುದಾಗಿ ಚಿತ್ರ ಮಂದಿರಗಳ ಮಾಲೀಕರು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ' ಎಂದು ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್‌ ಶುಕ್ರವಾರ ದೂರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries