ಕಾಸರಗೊಡು: ನಗರದಲ್ಲಿ ತಲೆಹೊರೆ ಕಾರ್ಮಿಕರು ನಡೆಸುವ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕೂಲಿಯನ್ನು ಹೆಚ್ಚಿಸುವ ಬಗ್ಗೆ ಒಪ್ಪಂದವೇರ್ಪಡಿಸದಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಯಿತು.
ಎಸ್‍ಟಿಯು-ಬಿಎಂಎಸ್ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಹೊಸ ಬಸ್ ನಿಲ್ದಾಣ ಪ್ರದೇಶದಿಂದ ಆರಂಭಗೊಂಡ ಮೆರವನಿಗೆ ನಗರ ಪ್ರದಕ್ಷಿಣೆಯಾಗಿ ವಿರಾಗ್ ಭವನ ಪ್ರದೇಶದಲ್ಲಿ ಸಮಾಪನಗೊಂಡಿತು. ಎಸ್ ಟಿಯು ರಾಜ್ಯ ಕೋಶಾಧಿಕಾರಿ ಕೆ.ಪಿ.ಮುಹಮ್ಮದ್ ಅಶ್ರಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತಾಲಿಬ್ ಪಾರಕಟ್ಟ, ಬಿ.ಎಂ.ಎಸ್. ಜಿಲ್ಲಾ ಉಪಾಧ್ಯಕ್ಷ ಕೆ.ಎ. ಶ್ರೀನಿವಾಸನ್, ವಿ.ವಿ.ಬಾಲಕೃಷ್ಣನ್, ಕೆ.ಟಿ.ಅಬ್ದುಲ್ ರೆಹಮಾನ್, ಹರೀಶ್ ಕದ್ರೆಪಾಡಿ, ಪಿ.ದಿನೇಶ್, ಕೆ.ಶಫಿ, ಸತೀಶ್ ಮಧುರ್ ಮತ್ತು ಎ.ರಘು ಮಾತನಾಡಿದರು.
ಮನವಿ:ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.