ನವದೆಹಲಿ: ಕೇಂದ್ರ ಜಾಗೃತ ಆಯೋಗದ (ಸಿವಿಸಿ) ನೂತನ ಆಯುಕ್ತರಾಗಿ ಪ್ರವೀಣ್ ಕುಮಾರ್ ಶ್ರೀವಾಸ್ತವ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ನವದೆಹಲಿ: ಕೇಂದ್ರ ಜಾಗೃತ ಆಯೋಗದ (ಸಿವಿಸಿ) ನೂತನ ಆಯುಕ್ತರಾಗಿ ಪ್ರವೀಣ್ ಕುಮಾರ್ ಶ್ರೀವಾಸ್ತವ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನೂತನ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದರು.
ಶ್ರೀವಾಸ್ತವ ಅವರು ಕಳೆದ ವರ್ಷದ ಡಿಸೆಂಬರ್‌ನಿಂದ ಪ್ರಭಾರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 1988ನೇ ಬ್ಯಾಚ್‌ನ ಅಸ್ಸಾಂ-ಮೇಘಾಲಯ ಕೆಡರ್‌ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ. ಕೇಂದ್ರ ಸಂಪುಟ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಕಳೆದ ವರ್ಷದ ಜನವರಿಯಲ್ಲಿ ಅವರು ನಿವೃತ್ತರಾಗಿದ್ದರು.
ಆಯೋಗದಲ್ಲಿ ಮುಖ್ಯಸ್ಥರು ಹಾಗೂ ಇಬ್ಬರು ಆಯುಕ್ತರು ಇರುತ್ತಾರೆ. ಇವರ ಅಧಿಕಾರಾವಧಿಯು ನಾಲ್ಕು ವರ್ಷ ಅಥವಾ ಅವರಿಗೆ 65 ವರ್ಷ ಪೂರ್ಣಗೊಳ್ಳುವವರೆಗೆ ಇರುತ್ತದೆ.