ಚೆನ್ನೈ: ಜಲ್ಲಿಕಟ್ಟು ಕ್ರೀಡೆಗೆ ಹಸಿರು ನಿಶಾನೆ ತೋರಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಸ್ವಾಗತಿಸಿದ್ದಾರೆ. 'ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ತೀರ್ಪು ಇದಾಗಿದೆ' ಎಂದು ಬಣ್ಣಿಸಿದ್ದಾರೆ.

'ಮುಂದಿನ ವರ್ಷ ಪೊಂಗಲ್ ಹಬ್ಬದ ಸಂದರ್ಭದಲ್ಲಿ ವಿಜಯೋತ್ಸವ ಆಚರಿಸಲಾಗುವುದು. ಜಲ್ಲಿಕಟ್ಟು ಕ್ರೀಡೆ ನಡೆಸುವ ಸಲುವಾಗಿ ಮದುರೈನ ಅಲಂಗನಲ್ಲೂರಿನಲ್ಲಿ ಬೃಹತ್ ಅಖಾಡ ನಿರ್ಮಿಸಲಾಗುವುದು ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧದ ತೆರವಿಗಾಗಿ ನಿರಂತರ ಪ್ರಯತ್ನ ನಡೆಸಿದ ಶ್ರೇಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು ಎಂದು ಬಿಜೆಪಿಯ ರಾಜ್ಯ ಘಟಕದ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ 'ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆಯಾಗಿರುವ ಜಲ್ಲಿಕಟ್ಟು ಮೇಲಿದ್ದ ನಿಷೇಧವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಕ್ಕಾಗಿ ತಮಿಳುನಾಡು ಜನತೆ ಹಾಗೂ ಬಿಜೆಪಿ ಘಟಕದ ಪರವಾಗಿ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇವೆ' ಎಂದಿದ್ದಾರೆ.