ಕೋಲ್ಕತ್ತ: ಪಶ್ಚಿಮ ಬಂಗಳಾದ ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಮಂಗಳವಾರ ಸಂಭವಿಸಿದ್ದ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿಯೂ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಒಡಿಶಾದಲ್ಲಿ ಬಂಧಿಸಿದ್ದಾರೆ.
ಕೋಲ್ಕತ್ತ: ಪಶ್ಚಿಮ ಬಂಗಳಾದ ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಮಂಗಳವಾರ ಸಂಭವಿಸಿದ್ದ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿಯೂ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಒಡಿಶಾದಲ್ಲಿ ಬಂಧಿಸಿದ್ದಾರೆ.
ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದರು. ಪಶ್ಚಿಮ ಬಂಗಾಳದ ಸಿಐಡಿ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ಭಾನು ಬಾಗ್ ಅಕ್ರಮ ಪಟಾಕಿ ಕಾರ್ಖಾನೆಯನ್ನು ನಡೆಸುತ್ತಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ನಡೆದಿದ್ದ ಸ್ಫೋಟದಲ್ಲಿ ಭಾನು ಬಾಗ್ ಕೂಡ ತೀವ್ರವಾಗಿ ಗಾಯಗೊಂಡಿದ್ದ. ಒಡಿಶಾದ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತನನ್ನು ಬಂಧಿಸಲಾಗಿದೆ ಎಂದು ಸಿಐಡಿ ಅಧಿಕಾರಿ ತಿಳಿಸಿದ್ದಾರೆ.
ಬಾಗ್‌ಗೆ ಶೇಕಡಾ 70ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾನೆ ಎಂದು ಅವರು ಹೇಳಿದರು.
ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.