ಬದಿಯಡ್ಕ: ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ಉಪದೇವತೆಗಳ ಸನ್ನಿಧಿಗೆ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಜರಗಿತು. ಬೆಳಗ್ಗೆ 9.30ರ ಮಿಥುನ ಲಗ್ನ ಶುಭಮುಹೂರ್ತದಲ್ಲಿ ಉದ್ಯಮಿ, ಕೊಡುಗೈದಾನಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಶಿಲಾನ್ಯಾಸಗೈದರು. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಿತು. ಗಣ್ಯರು, ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಸೇವಾಸಮಿತಿ, ಮಹಿಳಾವೃಂದ, ಯುವಕವೃಂದದ ಪದಾಧಿಕಾರಿಗಳು ಹಾಗೂ ಸದಸ್ಯರು, ಊರಪರವೂರ ಭಕ್ತಾದಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಬೆಳಗ್ಗೆ ಬದಿಯಡ್ಕ ಲಕ್ಷ್ಮೀಗಣೇಶ ಕುಣಿತ ಭಜನಾ ತಂಡದ ಸದಸ್ಯರಿಂದ ಕುಣಿತ ಭಜನೆ ಜರಗಿತು.
ಮನವಿ:
ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.
CANARA BANK
BADIYADKA BRANCH
A/c NUMBER: 0611101029775
IFSC: CNRB0004489