ಕೊಟ್ಟಾಯಂ: ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಮ್ಮನ್ ಚಾಂಡಿ ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿರುವ ಎಚ್‍ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈರಲ್ ನ್ಯುಮೋನಿಯಾದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪುತ್ರ ಚಾಂಡಿ ಉಮ್ಮನ್ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ. ಸಂದರ್ಶಕರನ್ನು ಅನುಮತಿಸಲಾಗುವುದಿಲ್ಲ ಮತ್ತು ಎಲ್ಲರೂ ಪ್ರಾರ್ಥಿಸಬೇಕು ಎಂದು ಚಾಂಡಿ ಉಮ್ಮನ್ ಫೇಸ್‍ಬುಕ್‍ನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಉಮ್ಮನ್ ಚಾಂಡಿ ಅವರ ಸಹೋದರ ಅಲೆಕ್ಸ್ ವಿ ಚಾಂಡಿ ಅವರು ಕುಟುಂಬಸ್ಥರು ಚಿಕಿತ್ಸೆ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳ ಸೂಚನೆಯಂತೆ ವೈದ್ಯಕೀಯ ಮಂಡಳಿಯನ್ನು ರಚಿಸಿದ್ದರು. ನಂತರ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು.