ದೇಶ ಕೋವಿಡ್ ಸಾಂಕ್ರಾಮಿಕದ ಮೊದಲ ಅಲೆ ಎದುರಿಸಿದ ವರ್ಷವಾದ 2020-21ರ ನೀತಿ ಆಯೋಗದ ವಾರ್ಷಿಕ ಆರೋಗ್ಯ ಸೂಚ್ಯಂಕದಲ್ಲಿ ದೊಡ್ಡ ರಾಜ್ಯಗಳ ಪೈಕಿ ದಕ್ಷಿಣದ ರಾಜ್ಯಗಳಾದ ಕೇರಳ, ತಮಿಳುನಾಡು ಮತ್ತು ತೆಲಂಗಾಣ ಅಗ್ರ ಸ್ಥಾನಗಳನ್ನು ಪಡೆದುಕೊಂಡಿವೆ.
ಒಟ್ಟು 24 ಆರೋಗ್ಯ ನಿರ್ವಹಣೆ ಸೂಚಿಗಳ ಆಧಾರದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸೂಚ್ಯಂಕಗಳನ್ನು ನೀತಿ ಆಯೋಗವು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ವಿಶ್ವ ಬ್ಯಾಂಕ್ ಸಹಯೋಗದೊಂದಿಗೆ ಹೊರತರುತ್ತಿದೆ.
ಈ 2020-21ರ ಆರೋಗ್ಯ ಸೂಚ್ಯಂಕದಲ್ಲಿ ದೊಡ್ಡ ರಾಜ್ಯಗಳ ಪೈಕಿ ಕೊನೆಯ ಮೂರು ಸ್ಥಾನಗಳು ಬಿಹಾರ (19), ಉತ್ತರ ಪ್ರದೇಶ (18) ಮತ್ತು ಮಧ್ಯಪ್ರದೇಶ (17)ಕ್ಕೆ ಹೋಗಿವೆ.
ವರ್ಷದಿಂದ ವರ್ಷಕ್ಕೆ ನಿರ್ವಹಣೆಯನ್ನು ಪರಿಗಣಿಸಿದಾಗ 2019-20ಯ ನಿರ್ವಹಣೆಯ ಆಧಾರದಲ್ಲಿ ರಾಜಸ್ಥಾನ, ಉತ್ತರಾಖಂಡ ಮತ್ತು ಒಡಿಶಾ ಅಗ್ರ ಸ್ಥಾನಗಳನ್ನು ಪಡೆದುಕೊಂಡಿವೆ.
ಸಣ್ಣು ರಾಜ್ಯಗಳ ಪೈಕಿ ಒಟ್ಟಾರೆ ಅತ್ಯುತ್ತಮ ನಿರ್ವಹಣೆಯನ್ನು ತ್ರಿಪುರಾ ದಾಖಲಿಸಿದ್ದರೆ, ಸಿಕ್ಕಿಂ ಮತ್ತು ಗೋವಾ ನಂತರದ ಸ್ಥಾನಗಳನ್ನು ಹೊಂದಿವೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮಣಿಪುರ ಕೊನೆಯ ಮೂರು ಸ್ಥಾನಗಳನ್ನು ಪಡೆದಿವೆ.
ಎಂಟು ಕೇಂದ್ರಾಡಳಿತ ಪ್ರದೇಶಗಳ ಪೈಕಿ ಲಕ್ಷದ್ವೀಪ ಅತ್ಯುತ್ತಮ ನಿರ್ವಹಣೆ ತೋರಿದೆ. 2019-20ರ ಆರೋಗ್ಯ ಸೂಚ್ಯಂಕ ವರದಿಯಲ್ಲಿ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಗ್ರ ಸ್ಥಾನಿಗಳಾಗಿದ್ದವು.
ಮನವಿ:ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.