ಬೆಂಗಳೂರು: ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಕುರಿತು ಶನಿವಾರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಕುರಿತು ಶನಿವಾರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
'ಬಿಜೆಪಿ ಕರ್ನಾಟಕದ ಜನತೆಯ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತದೆ. ಶ್ರದ್ಧೆಯಿಂದ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಮ್ಮ ದೂರದೃಷ್ಟಿಯ ಮೇಲೆ ನಂಬಿಕೆ ಇಟ್ಟ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಜನರ ಒಳಿತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಮತ್ತು ರಚನಾತ್ಮಕ ವಿರೋಧ ಪಕ್ಷವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತದೆ' ಎಂದು ನಡ್ಡಾ ಹೇಳಿದ್ದಾರೆ.