ನವದೆಹಲಿ: ಚರಂಡಿಗಳು, ನದಿಗಳು ಮತ್ತು ಜಲಮೂಲಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯಲು ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ನವದೆಹಲಿ: ಚರಂಡಿಗಳು, ನದಿಗಳು ಮತ್ತು ಜಲಮೂಲಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯಲು ಯುದ್ಧೋಪಾದಿಯಲ್ಲಿ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಎಲ್ಲ ರಾಜ್ಯಗಳ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ವಿಷಯ ಕುರಿತು ನ್ಯಾಯಮಂಡಳಿ ತನ್ನ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಹೆಚ್ಚಿನ ಸಂಖ್ಯೆಯ ನದಿಗಳ ನೀರಿನ ಗುಣಮಟ್ಟವು ಕೊಳಚೆ ನೀರನ್ನು ಬಿಡುವುದರಿಂದ ಕಳಪೆಯಾಗಿದೆ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪೀಠವು, ಈ ಸಂಬಂಧ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ.
'ನದಿಗಳ ಮಾಲಿನ್ಯದಿಂದ ದೊಡ್ಡ ಪ್ರಮಾಣದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಂಗಾ, ಯಮುನಾ ಸೇರಿದಂತೆ ದೊಡ್ಡ ನದಿಗಳ ನೀರು ಮಲಿನಗೊಂಡಿವೆ. ಜಲಕಾಯಗಳ ಮಾಲಿನ್ಯ ತಡೆಗಟ್ಟಲು ಸ್ವದೇಶಿ ನಿರ್ಮಿತ ತಂತ್ರಜ್ಞಾನ ಅಭಿವೃದ್ಧಿಪಡಿಸಬೇಕಾದ ತುರ್ತು ಅಗತ್ಯವಿದೆ. ಕುಡಿಯುವ ನೀರಿಗೆ ಕೊಳಚೆ ನೀರು ಯಾವುದೇ ಕಾರಣಕ್ಕೂ ಸೇರಬಾರದು. ಈ ದಿಸೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜತೆಗೂಡಿ ಕೆಲಸ ಮಾಡಿ ಮೂರು ತಿಂಗಳಲ್ಲಿ ಪ್ರಗತಿಯ ವರದಿ ಸಲ್ಲಿಸಬೇಕು' ಎಂದು ಪೀಠ ಸೂಚಿಸಿದೆ.