ಲಖನೌ: ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿರುವ ಕುಸ್ತಿಪಟುಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗಿದೆ. ಈಗ ದೆಹಲಿ ಪೊಲೀಸರು ನಿಷ್ಪಕ್ಷಪಾತ ತನಿಖೆಯನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಧರಣಿ ನಿರತರಾಗಿರುವ ಕುಸ್ತಿಪಟುಗಳಲ್ಲಿ ನಾನು ಮಾಡುವ ವಿನಂತಿ ಏನೆಂದರೆ, ಅವರೆಲ್ಲರ ಬೇಡಿಕೆ ಈಡೇರಿಸಲಾಗಿದೆ. ನ್ಯಾಯಾಲಯವು ನಿರ್ದೇಶನವನ್ನು ನೀಡಿದೆ. ನಿಷ್ಪಕ್ಷಪಾತ ತನಿಖೆ ನಡೆಸಲು ಬಿಡಬೇಕು ಎಂದು ಹೇಳಿದರು.
ತಪ್ಪಿತಸ್ಥರ ವಿರುದ್ಧ ದೆಹಲಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೇಶದ ಪ್ರಮುಖ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಏಳು ಮಂದಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆ ತೀವ್ರಗೊಂಡ ಬಳಿಕ ದೆಹಲಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ.