HEALTH TIPS

ಬ್ರಿಜ್‌ಭೂಷಣ್ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎನ್ನುವುದು ತಪ್ಪು: ದೆಹಲಿ ಪೊಲೀಸ್

               ವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ (ಡಬ್ಲ್ಯು‌ಎಫ್‌ಐ) ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ದೆಹಲಿ ಪೊಲೀಸ್ ಸ್ಪಷ್ಟಪಡಿಸಿದೆ.

             ಈ ಪ್ರಕರಣದಲ್ಲಿ ಡಬ್ಲ್ಯು‌ಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ವಿರುದ್ಧ ದೆಹಲಿ ಪೊಲೀಸರಿಗೆ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂಬ ಕೆಲ ಮಾಧ್ಯಮ ವರದಿಗಳು ತಪ್ಪು ಎಂದು ತಿಳಿಸಿದೆ.

              ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಪೊಲೀಸ್, ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ದೆಹಲಿ ಪೊಲೀಸರಿಗೆ ಸಾಕಷ್ಟು ಪುರಾವೆಗಳು ಸಿಕ್ಕಿಲ್ಲ ಮತ್ತು ಪ್ರಕರಣದ ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ ಎಂದು ಕೆಲ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಈ ಸುದ್ದಿ ತಪ್ಪಾಗಿದ್ದು, ಅತ್ಯಂತ ಸೂಕ್ಷ್ಮ ಪ್ರಕರಣದ ತನಿಖೆ ನಾಜೂಕಿನಿಂದ ನಡೆಯುತ್ತಿದೆ ಎಂದು ಹೇಳಿದೆ.

                  ಈ ಹಿಂದೆ ಒಬ್ಬ ಬಾಲಕಿ ಸೇರಿದಂತೆ ಏಳು ಮಂದಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್ ಬಂಧಿಸಲು ಸಾಕಷ್ಟು ಸಾಕ್ಷ್ಯಾಧಾರಗಳು ದೊರಕಿಲ್ಲ ಎಂದು ದೆಹಲಿ ಪೊಲೀಸ್ ಹೇಳಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries