HEALTH TIPS

ಎನ್ ಸಿ ಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜಿನಾಮೆ: ನಿರ್ಧಾರ ಪ್ರಕಟಿಸಿದ ಹಿರಿಯ ನಾಯಕ

            ಮುಂಬಯಿ: ಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ.

                  ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ್ ಮಾಜೆ ಸಂಗಟಿ’ ಬಿಡುಗಡೆ ಸಮಾರಂಭದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಸುದೀರ್ಘ ರಾಜಕೀಯ ಜೀವನದ ನಂತರ ಅದನ್ನು ಎಲ್ಲೋ ನಿಲ್ಲಿಸುವ ಬಗ್ಗೆ ಯೋಚಿಸಬೇಕು. ವ್ಯಕ್ತಿಗೆ ದುರಾಸೆ ಇರಬಾರದು ಎಂದು ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ.

              ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ. 1999 ರಲ್ಲಿ ಪಕ್ಷವನ್ನು ಸ್ಥಾಪಿಸಿದ ಎನ್ಸಿಪಿ ಮುಖ್ಯಸ್ಥ ಪವಾರ್, ನಾನು ನನ್ನ ರಾಜಕೀಯ ಜೀವನವನ್ನು ಮೇ 1, 1960 ರಂದು ಪ್ರಾರಂಭಿಸಿದೆ. ನಿನ್ನೆ ನಾವು ಮೇ ದಿನವನ್ನು ಆಚರಿಸಿದ್ದೇವೆ ಇಂದು ನನ್ನ ನಿರ್ಧಾರ ಪ್ರಕಟಿಸಿದ್ದೇನೆ ಎಂದಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಶರದ್ ಪವಾರ್ ತಮ್ಮ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

                  ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳದ ಹೊರತು ಸ್ಥಳದಿಂದ ಹೊರಬರುವುದಿಲ್ಲ ಎಂದು ಬೆದರಿಕೆ ಹಾಕಿದರು.

               ಈ ವೇಳೆ ಮಾತನಾಡಿದ ಶರದ್ ಪವಾರ್ , ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. ನಿರಂತರ ಪ್ರಯಾಣ ನನ್ನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ, ನಾನು ಎಂದಿನಂತೆ ನಿಮ್ಮೆಲ್ಲರಿಗೂ ಸಿಗುತ್ತಿರುತ್ತೇನೆ ಎಂದು ಶರದ್ ಪವಾರ್ ಎನ್ಸಿಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

                 ನಾಲ್ಕು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿ, ಕೇಂದ್ರ ರಕ್ಷಣಾ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಪವಾರ್ ಅವರು 2019 ರ ನಂತರ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್ಸಿಪಿ, ಕಾಂಗ್ರೆಸ್ ಮತ್ತು ನಂತರ ಸೈದ್ಧಾಂತಿಕವಾಗಿ ಶಿವಸೇನೆಯ ವಿರುದ್ಧದ ಒಕ್ಕೂಟವನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries