ಕೋಲ್ಕತ್ತ: ಪಶ್ಚಿಮಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ ಬೇರೊನ್ ಬಿಶ್ವಾಸ್ ಅವರು ಟಿಎಂಸಿ ಪಕ್ಷವನ್ನು ಸೇರಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಅವರು ಸೇರ್ಪಡೆಗೊಂಡಿದ್ದಾರೆ.
ಕೋಲ್ಕತ್ತ: ಪಶ್ಚಿಮಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ ಬೇರೊನ್ ಬಿಶ್ವಾಸ್ ಅವರು ಟಿಎಂಸಿ ಪಕ್ಷವನ್ನು ಸೇರಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ಅವರು ಸೇರ್ಪಡೆಗೊಂಡಿದ್ದಾರೆ.
ಬಿಶ್ವಾಸ್ ಅವರು ಮುರ್ಶಿದಾಬಾದ್ ಜಿಲ್ಲೆಯ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಸಗರ್ದಿಘಿ ಕ್ಷೇತ್ರದ ಶಾಸಕರಾಗಿದ್ದಾರೆ.
'ಸದ್ಯ ನಡೆಯುತ್ತಿರುವ ಜೊನೊ ಸಂಜೋಗ್ ಯಾತ್ರೆಯ ನಡುವೆ ಅಭಿಷೇಕ್ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಸಗರ್ದಿಘಿ ಕ್ಷೇತ್ರದ ಸಾಸಕ ಬೇರೋನ್ ಬಿಶ್ವಾಸ್ ನಮ್ಮ ಪಕ್ಷ ಸೇರಿದ್ದಾರೆ. ಅವರನ್ನು ತುಂಬು ಹೃದಯದಿಂದ ತೃಣಮೂಲ ಕಾಂಗ್ರೆಸ್ ಕುಟುಂಬಕ್ಕೆ ಆಹ್ವಾನಿಸಿದ್ದೇವೆ. ಬಿಜೆಪಿಯ ವಿಭಜಿಸುವ ಮತ್ತು ತಾರತಮ್ಯದ ರಾಜಕೀಯದ ವಿರುದ್ಧದ ಹೋರಾಟದಲ್ಲಿ ನಿಮ್ಮ ಸರಿಯಾದ ವೇದಿಕೆ ಆಯ್ಕೆ ಮಾಡಿಕೊಂಡಿದ್ದೀರಿ. ಒಟ್ಟಿಗೆ ನಾವು ಗೆಲ್ಲುತ್ತೇವೆ' ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಈ ವರ್ಷದ ಆರಂಭದಲ್ಲಿ ಸಗರ್ದಿಘಿ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಶ್ವಾಸ್ ಗೆಲುವು ದಾಖಲಿಸಿದ್ದರು. 2021ರ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲಿ ಕಾಂಗ್ರೆಸ್ ವಿಫಲವಾಗಿತ್ತು.