ಬೆಂಗಳೂರು: ಕರ್ನಾಟಕದ ನೂತನ ಮಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಳಿಕ ಈ ಕುರಿತು ಟ್ವೀಟ್ ಮಾಡಿರುವ ಸ್ಟಾಲಿನ್, ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಜಾತ್ಯತೀತ ಜೋಡಿಯು ಸಮರ್ಥ ಆಡಳಿತದಿಂದ ಕರ್ನಾಟಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ನಾನು ಪ್ರಮಾಣಿಕವಾಗಿ ನಂಬುತ್ತೇನೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಎದ್ದಿರುವ ಈ ಅಲೆಯು ಭಾರತದ ಇತರೆ ಭಾಗಗಳಿಗೂ ಪಸರಿಸಬೇಕು. ಇಂದು ಬೆಂಗಳೂರಿನಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮವು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.