ಕಾಸರಗೋಡು: ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದಲ್ಲಿ ವಷರ್ಂಪ್ರತಿ ನಡೆಸಲಾಗುವ ವಸಂತ ವೇದ ಶಿಬಿರವು 2023ರ ಮೇ 7ರಿಂದ ಆರಂಭಗೊಳ್ಳಲಿದೆ. ಮೇ 6ರಂದು ಶಿಬಿರ ವಿದ್ಯಾರ್ಥಿಗಳ ನೋಂದಣಿ ಪೂರ್ಣಗೊಳ್ಳಲಿದೆ.
7ರಂದು ಬೆಳಗ್ಗೆ 10ಕ್ಕೆ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಅನಂತ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ವಸಂತ ವೇದ ಶಿಬಿರವನ್ನು ಉದ್ಘಾಟಿಸುವರು. ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ ಶ್ರೀಧರ ಆಚಾರ್ಯ ಒಡೆಯ ಹೋಬಳಿ ಅಧ್ಯಕ್ಷತೆ ವಹಿಸುವರು.
ಮುಖ್ಯಅತಿಥಿಯಾಗಿ ಉಡುಪಿ ಮಂಗಳಾ ಜ್ಯುವೆಲ್ಲರ್ಸ್ ಮಾಲಕರೂ, ಕೊಡಂಕೂರು ವಿಶ್ವಬ್ರಾಹ್ಮಣ ಸಂಸ್ಕøತ ವಿದ್ಯಾಪೀಠದ ಅಧ್ಯಕ್ಷರಾದ ಶ್ರೀಶ ಆಚಾರ್ಯ ಅಲೆಯೂರು ಭಾಗವಹಿಸುವರು.ಸಮಾರಂಭದಲ್ಲಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವ ಅಧ್ಯಕ್ಷ ಪಿ ವಿ ಗಂಗಾಧರ ಆಚಾರ್ಯ ಉಡುಪಿ, ವೇದ ಸಂಜೀವಿನಿ ಪಾಠಶಾಲೆಯ ಸಂಚಾಲಕ ಬಿ .ಸೂರ್ಯ ಕುಮಾರ್ ಆಚಾರ್ಯ ಹಳೆಯಂಗಡಿ, ಅಸೆಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಗೋವು ಪರ್ಯಾವರಣ್ ಟ್ರಸ್ಟ್ ಅಧ್ಯಕ್ಷ ಬಿ ಸುಂದರ ಆಚಾರ್ಯ ಬೆಳುವಾಯಿ, ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಶ್ರೀ ಸರಸ್ವತೀ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, , ಶಿಬಿರಾಧಿಕಾರಿ ಐ ಲೋಲಾಕ್ಷ ಆಚಾರ್ಯ ಕಟಪಾಡಿ ಉಪಸ್ಥಿತರಿರುವರು.
ವಸಂತ ವೇದ ಶಿಬಿರದಲ್ಲಿ ಪ್ರಮುಖವಾಗಿ ಸಂಧ್ಯಾವಂದನೆ ಪಾಠವನ್ನು ಹಾಗೂ ನಮ್ಮ ಧರ್ಮ. ಸಂಸ್ಕಾರ, ಆಚರಣೆಗಳು, ಕರ್ತವ್ಯಗಳು ಮುಂತಾದ ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ನೀಡಲಾಗುವುದು. ವಸಂತ ವೇದ ಶಿಬಿರದ ಸಮಾರೋಪ ಶ್ರೀ ಜಗದ್ಗುರುಗಳ ಪಟ್ಟಾಭಿಷೇಕ ವಧರ್ಂತಿ ದಿನವಾದ ಮೇ 14ರಂದು ನಡೆಯಲಿದೆ.