ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜಿ. ಜೋಶಿ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿವೆ.
ಜೋಶಿ (86) ಅವರನ್ನು ಮಾಹಿಮ್‌ನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಹಿರಿಯ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಸಿಎಂ ಮತ್ತು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ, ಪತ್ನಿ ರಶ್ಮಿ ಮತ್ತು ಇತರ ಕುಟುಂಬ ಸದಸ್ಯರು ಮತ್ತು ಪಕ್ಷದ ಮುಖಂಡರು ಜೋಶಿಯವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಧಾವಿಸಿದರು.
ಜೋಶಿ ನಾಲ್ಕು ವರ್ಷಗಳ ಕಾಲ (1995-1999) ಮೊದಲ ಶಿವಸೇನೆ ಮುಖ್ಯಮಂತ್ರಿಯಾಗಿದ್ದರು, ಆಗ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆದುಕೊಂಡಿತು. ನಂತರ, ಅವರು ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಲೋಕಸಭೆಯ ಸ್ಪೀಕರ್ ಆಗಿ (2002-2004) ಸೇವೆ ಸಲ್ಲಿಸಿದ್ದರು.
ಕಾಂಗ್ರೆಸ್ ನ ಶಿವರಾಜ್ ಪಾಟೀಲ್ (1991-1996) ನಂತರ ಮಹಾರಾಷ್ಟ್ರದಿಂದ ಲೋಕಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಎರಡನೇಯ ವ್ಯಕ್ತಿ ಜೋಶಿ ಆಗಿದ್ದಾರೆ.