HEALTH TIPS

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್​ ಪೈಪೋಟಿ ಮಧ್ಯೆ ಸಿಎಂ ಸ್ಥಾನಕ್ಕೆ ಮತ್ತೊಬ್ಬರು ಆಕಾಂಕ್ಷಿ!

                ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾರಿ ಪೈಪೋಟಿಯಲ್ಲಿ ಇರುವ ಮಧ್ಯೆ ಇದೀಗ ಆ ಸ್ಥಾನಕ್ಕೆ ಇನ್ನೊಬ್ಬರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

                  ಸಿಎಂ ಆಯ್ಕೆ ವಿಚಾರ ಈಗಾಗಲೇ ಹೈಕಮಾಂಡ್​ಗೆ ತಲುಪಿದ್ದು, ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಪ್ರತ್ಯೇಕವಾಗಿ ಭೇಟಿ ಮಾಡಿ ಭಾರಿ ಮಾತುಕತೆ ನಡೆಸಿದ್ದಾರೆ. ಅದಾಗ್ಯೂ ಇದುವರೆಗೂ ಸಿಎಂ ಸ್ಥಾನದ ಕುರಿತು ಅಂತಿಮ ನಿರ್ಧಾರ ಹೊರಹೊಮ್ಮಿಲ್ಲ.

                 ಈ ನಡುವೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಕೂಡ ಸಿಎಂ ಸ್ಥಾನದ ಕುರಿತು ತಮಗೂ ಆಸೆ ಇದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್ ತನಗೇನಾದರೂ ಸಿಎಂ ಸ್ಥಾನ ನೀಡಿದರೆ ಅದನ್ನು ಯಶಸ್ವಿಯಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ.

                          ನನ್ನ ಹಾಗೂ ನನ್ನ ಕಾರ್ಯವೈಖರಿ ಕುರಿತು ಕಾಂಗ್ರೆಸ್​ ಹೈಕಮಾಂಡ್​ನವರಿಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿರುವ ಪರಮೇಶ್ವರ್, ತನ್ನನ್ನು ಸಿಎಂ ಮಾಡಿದರೆ ತಾನು ಸಿದ್ಧ ಎಂಬ ಅನಿಸಿಕೆಯನ್ನು ಬಹಿರಂಗಪಡಿಸಿದ್ದಾರೆ. ಆದರೆ ಸಿಎಂ ಸ್ಥಾನಕ್ಕಾಗಿ ನಾನು ಲಾಬಿ ನಡೆಸುವುದಿಲ್ಲ ಎಂಬುದನ್ನೂ ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries