ನವದೆಹಲಿ: ದಾಖಲೆ ಇಲ್ಲದೆಯೇ ₹ 2,000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ನವದೆಹಲಿ: ದಾಖಲೆ ಇಲ್ಲದೆಯೇ ₹ 2,000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಬೇಸಿಗೆ ರಜೆಯಲ್ಲಿ ಇಂತಹ ಅರ್ಜಿಗಳ ವಿಚಾರಣೆ ನಡೆಸಲಾಗದು ಎಂದು ರಜಾಕಾಲದ ನ್ಯಾಯಪೀಠದ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ.ವಿ. ವಿಶ್ವನಾಥನ್ ಹೇಳಿದ್ದಾರೆ.
ಮುಖ್ಯನ್ಯಾಯಮೂರ್ತಿ ನೇತೃತ್ವದ ನ್ಯಾಯಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಲಾಗುವುದು ಎಂದಿದ್ದಾರೆ.
ಅಪರಾಧಿಗಳು, ಭಯೋತ್ಪಾದಕರು ಕೂಡ ₹ 2,000 ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ನ್ಯಾಯಪೀಠವನ್ನು ಕೋರಿದ್ದರು.
ವಿಚಾರಣೆ ವಿಳಂಬವಾದರೆ ಕಪ್ಪು ಹಣವನ್ನು ಬ್ಯಾಂಕ್ ಮೂಲಕ ವಿನಿಮಯ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದಿರುವ ಅವರು ಈಗಾಗಲೇ ₹50 ಸಾವಿರ ಕೋಟಿ ವಿನಿಮಯ ಮಾಡಲಾಗಿದೆ ಎಂಬ ಪತ್ರಿಕಾ ವರದಿಯನ್ನೂ ಉಲ್ಲೇಖಿಸಿದ್ದಾರೆ.