ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಕೊನೆಗೂ ಅಂತಿಮವಾಗಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಹೈಬ್ರಿಡ್ ಮಾದರಿ ವೇಳಾಪಟ್ಟಿ ಪ್ರಕಟ ಮಾಡಿದೆ.
ಟೂರ್ನಿಯ ಒಟ್ಟು 13 ಪಂದ್ಯಗಳ ಪೈಕಿ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಬಾಕಿ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಆಗಸ್ಟ್ 31 ರಿಂದ ಸೆಪ್ಟೆಂಬರ್ 17, 2023 ರವರೆಗೆ ಈ 13 ರೋಚಕ ODI ಪಂದ್ಯಗಳು ನಡೆಯಲಿವೆ.
Dates and venues have been finalised for the Asia Cup 2023! The tournament will be held from 31st August to 17th September in a hybrid model - with 4 matches being held in Pakistan and the rest in Sri Lanka! https://t.co/bvkfSSAp9w#AsiaCup #ACC
— AsianCricketCouncil (@ACCMedia1) June 15, 2023
ಟೂರ್ನಿ ಒಟ್ಟು 2 ಗುಂಪುಗಳಲ್ಲಿ ಟೂರ್ನಿ ಆಯೋಜನೆ ಮಾಡಲಾಗಿದ್ದು, ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯುತ್ತವೆ. ಸೂಪರ್ ಫೋರ್ ಹಂತದಿಂದ ಅಗ್ರ ಎರಡು ತಂಡಗಳು ನಂತರ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎಸಿಸಿ, "2023 ರ ಏಷ್ಯಾ ಕಪ್ 2023 ರ ಸೆಪ್ಟೆಂಬರ್ 31 ರಿಂದ 17 ರವರೆಗೆ ನಡೆಯಲಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳದ ಗಣ್ಯ ತಂಡಗಳು ಒಟ್ಟು 13 ರೋಚಕ ODI ಪಂದ್ಯಗಳಲ್ಲಿ ಸ್ಪರ್ಧಿಸಲಿವೆ. ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವುದು, ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಉಳಿದ ಒಂಬತ್ತು ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಾಗುತ್ತದೆ" ಎಂದು ಹೇಳಿದೆ.
"2023 ರ ಆವೃತ್ತಿಯು ಎರಡು ಗುಂಪುಗಳನ್ನು ಒಳಗೊಂಡಿರುತ್ತದೆ, ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯುತ್ತವೆ. ಸೂಪರ್ ಫೋರ್ ಹಂತದಿಂದ ಅಗ್ರ ಎರಡು ತಂಡಗಳು ನಂತರ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತವೆ. ಕ್ರಿಕೆಟ್‌ನ ಈ ಆಚರಣೆಯನ್ನು ಅತ್ಯುತ್ತಮವಾಗಿ ವೀಕ್ಷಿಸಲು ವಿಶ್ವದಾದ್ಯಂತದ ಅಭಿಮಾನಿಗಳನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ" ಎಂದು ಎಸಿಸಿ ತಿಳಿಸಿದೆ.
ಅದರೆ ಪಂದ್ಯ ನಡೆಯುವ ಸ್ಥಳ ಮತ್ತು ದಿನಾಂಕಗಳನ್ನು ಎಸಿಸಿ ಇನ್ನೂ ಬಹಿರಂಗಪಡಿಸಿಲ್ಲ.