HEALTH TIPS

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 238ಕ್ಕೆ ಏರಿಕೆ, 900 ಮಂದಿಗೆ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

           ಭುವನೇಶ್ವರ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ.


           ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ, 'ಅಪಘಾತದಲ್ಲಿ 238 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 650 ಗಾಯಗೊಂಡ ಪ್ರಯಾಣಿಕರನ್ನು ಗೋಪಾಲ್‌ಪುರ, ಖಾಂತಪಾರಾ, ಬಾಲಸೋರ್, ಭದ್ರಕ್ ಮತ್ತು ಸೊರೊ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ' ಎಂದು ಆಗ್ನೇಯ ರೈಲ್ವೆ ತಿಳಿಸಿದೆ.


               12864 ಸರ್ ಎಂ ವಿಶ್ವೇಶ್ವರಯ್ಯ (ಬೆಂಗಳೂರು)-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ 1000 ಪ್ರಯಾಣಿಕರೊಂದಿಗೆ ಹೌರಾ ಕಡೆಗೆ ಪ್ರಯಾಣಿಸುತ್ತಿತ್ತು. ಅಪಘಾತದಿಂದಾಗಿ ಸ್ಥಳದಲ್ಲಿದ್ದ 200 ಮಂದಿ ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ಈಗ ಬಾಲಸೋರ್‌ನಿಂದ ಹೌರಾಕ್ಕೆ ಹೊರಟಿದೆ.

           ಖರಗ್‌ಪುರ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ನೀರು ಮತ್ತು ಚಹಾವನ್ನು ಒದಗಿಸಲಾಗುತ್ತಿದೆ. ರೈಲು ಹೌರಾಗೆ ತಲುಪಿದ ನಂತರ ಪ್ರಯಾಣಿಕರಿಗೆ ಆಹಾರದ ಪ್ಯಾಕೆಟ್‌ಗಳನ್ನು ಸಹ ಒದಗಿಸಲಾಗುವುದು ಎಂದು ಆಗ್ನೇಯ ರೈಲ್ವೆ ತಿಳಿಸಿದೆ.

           12864 ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಲವಾರು ಕೋಚ್‌ಗಳು ಹೌರಾಕ್ಕೆ ಹೋಗುವ ಮಾರ್ಗದಲ್ಲಿ ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದಿದ್ದವು. ಈವೇಳೆ 12841 ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಸಮಾನಾಂತರ ಟ್ರ್ಯಾಕ್‌ನಲ್ಲಿ ಎದುರುಗಡೆಯಿಂದ ಬಂದಿದ್ದು, ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕೆಲವು ಕೋರಮಂಡಲ್ ಎಕ್ಸ್‌ಪ್ರೆಸ್ ಕೋಚ್‌ಗಳು ಹಳಿತಪ್ಪಿ ಮೂರನೇ ಟ್ರ್ಯಾಕ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿವೆ.

            ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಪ್ರಕಾರ, ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

            ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ವಿವರವಾದ ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುವುದು ಮತ್ತು ರೈಲು ಸುರಕ್ಷತಾ ಆಯುಕ್ತರು ಸ್ವತಂತ್ರ ತನಿಖೆಯನ್ನು ಮಾಡುತ್ತಾರೆ ಎಂದು ಶನಿವಾರ ಹೇಳಿದರು.

                  ನಮ್ಮ ಗಮನ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲೆ ಇದೆ. ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರ ಮರುಸ್ಥಾಪನೆ ಪ್ರಾರಂಭವಾಗುತ್ತದೆ ಎಂದು ಅವರು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries