ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ದೇಶದ 10 ಲಕ್ಷ ಬೂತ್‌ಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.
ವಿವಿಧ ರಾಜ್ಯಗಳಿಂದ ಪಕ್ಷದ 2,500 ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಧ್ಯ ಪ್ರದೇಶ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ವಿಡಿ ಶರ್ಮಾ ಅವರು ಹೇಳಿದ್ದಾರೆ.
"ಪ್ರಧಾನಿ ಮೋದಿ ಅವರು ಜೂನ್ 27 ರಂದು ಭೋಪಾಲ್ ಗೆ ಆಗಮಿಸುತ್ತಿದ್ದಾರೆ. ಅಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ವರ್ಚುವಲ್ ಮೂಲಕ ದೇಶಾದ್ಯಂತ 10 ಲಕ್ಷ ಬೂತ್‌ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ" ಎಂದು ಖಜುರಾಹೊದ ಲೋಕಸಭಾ ಸದಸ್ಯ ಶರ್ಮಾ ಅವರು ತಿಳಿಸಿದ್ದಾರೆ.
ಮಧ್ಯ ಪ್ರದೇಶದ 64,100 ಬೂತ್‌ಗಳಿಂದ 38 ಲಕ್ಷ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.
‘ಪ್ರಧಾನಿ ಮೋದಿ ಅವಕಾಶ ನೀಡಿದರೆ ನಾವು ಭೋಪಾಲ್‌ನಲ್ಲಿ ರೋಡ್‌ಶೋ ಸಹ ನಡೆಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತವಿರುವ ಮಧ್ಯ ಪ್ರದೇಶದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.