ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹಿಳೆಯರಿಗೆ 27 ಕೋಟಿ 'ಮುದ್ರಾ' ಸಾಲಗಳನ್ನು ವಿತರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹಿಳೆಯರಿಗೆ 27 ಕೋಟಿ 'ಮುದ್ರಾ' ಸಾಲಗಳನ್ನು ವಿತರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮ ನಡೆಸುವವರಿಗೆ ಈ ಯೋಜನೆ ಮೂಲಕ ಸಾಲ ವಿತರಿಸಲಾಗುವುದು.
ಈ ಕುರಿತು ಅಮಿತ್ ಶಾ ಸರಣಿ ಟ್ವೀಟ್ ಮಾಡಿದ್ದಾರೆ.
ಒಂಬತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಬಾಹ್ಯಾಕಾಶ, ನವೋದ್ಯಮ, ವಾಣಿಜ್ಯ, ರಕ್ಷಣೆ ವಿಚಾರಗಳಲ್ಲಿ ಮಹಿಳೆಯರು ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಮಹಿಳಾ ಉದ್ಯಮಿಗಳಿಗೆ 27 ಕೋಟಿ ಮುದ್ರಾ ಸಾಲಗಳನ್ನು ವಿತರಿಸುವ ಮೂಲಕ ಭಾರತ ಹೊಸ ದಾಖಲೆ ಬರೆದಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.