HEALTH TIPS

ಏಕಲವ್ಯ ವಸತಿ ಶಾಲೆಗಳಿಗೆ 3 ವರ್ಷದಲ್ಲಿ 38 ಸಾವಿರ ಶಿಕ್ಷಕರ ನೇಮಕ: ಸಚಿವ ಅರ್ಜುನ್ ಮುಂಡಾ

                 ವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ (ಇಆರ್‌ಎಂಎಸ್‌) 38 ಸಾವಿರ ಶಿಕ್ಷಕರು ಮತ್ತು ಇತರ ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಬುಧವಾರ ತಿಳಿಸಿದರು.

                 ದೇಶದಾದ್ಯಂತ ಇರುವ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗಾಗಿ 1997-98ರಲ್ಲಿ ಇಂಥ ಶಾಲೆಗಳನ್ನು ಆರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇಂಥ ಶಾಲೆಗಳ ಸಂಖ್ಯೆ 109ರಿಂದ 401ಕ್ಕೆ ಏರಿಕೆಯಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

                 '2025-26ರ ಒಳಗಾಗಿ ದೇಶದಾದ್ಯಂತ ನಿಗದಿತ 740 ಬ್ಲಾಕ್‌ಗಳಲ್ಲಿ ಇಎಂಆರ್‌ಎಸ್‌ ತೆರೆಯಲು ಸರ್ಕಾರ ಚಿಂತಿಸಿದೆ. ಈಗಾಗಲೇ 693 ಶಾಲೆಗಳು ಮಂಜೂರಾಗಿವೆ' ಎಂದೂ ಅವರು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries