ಮುಂಬೈ: ಪಾಕಿಸ್ತಾನ ಜೈಲಿನಲ್ಲಿ ಬಂಧಿಯಾಗಿರುವ ಮಹಾರಾಷ್ಟ್ರದ ಮೀನುಗಾರರ ಕುಟುಂಬಗಳಿಗೆ ನೆರವಾಗಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ಮುಂಬೈ: ಪಾಕಿಸ್ತಾನ ಜೈಲಿನಲ್ಲಿ ಬಂಧಿಯಾಗಿರುವ ಮಹಾರಾಷ್ಟ್ರದ ಮೀನುಗಾರರ ಕುಟುಂಬಗಳಿಗೆ ನೆರವಾಗಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ಮೀನುಗಾರರ ಕುಟುಂಬಗಳ ಜೀವನೋಪಾಯಕ್ಕೆ ದಿನಕ್ಕೆ ₹300 ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಮ್ಮತ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪಾಕ್‌ನಲ್ಲಿ ಬಂಧಿಯಾಗಿರುವ ರಾಜ್ಯದ ಮೀನುಗಾರರ ಕುಟುಂಬಗಳಿಗೆ ಧನ ಸಹಾಯದ ನೆರವು ನೀಡುವ ಕಾರ್ಯಕ್ರಮವನ್ನು ಗುಜರಾತ್ ಸರ್ಕಾರ ಈಗಾಗಲೇ ಪ್ರಾರಂಭಿಸಿದೆ.
ತಮ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಪಾಕಿಸ್ತಾನ ಕಡಲ ಭದ್ರತಾ ಪಡೆ ಭಾರತೀಯ ಮೀನುಗಾರರನ್ನು ಬಂಧಿಸಿದೆ.