ಬಾಲೇಶ್ವರ: ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ರೈಲಿನಲ್ಲಿ ವಿದ್ಯುತ್ ಪ್ರವಹಿಸಿ 40 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಒಟ್ಟು 278 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇವರಲ್ಲಿ 40 ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ.
ಪಿಎಸ್‌ಯ ಪಿ. ಕುಮಾರ ನಾಯಕ್ ಪ್ರತಿಕ್ರಿಯಿಸಿ, 'ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ರೈಲು ಹಳಿಗಳ ಮೇಲ್ಭಾಗದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬೋಗಿಯ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ' ಎಂದು ತಿಳಿಸಿದ್ದಾರೆ.
ಹೌರಾ-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಜೂನ್ 2ರಂದು ಸಂಜೆ 7.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಇದರಲ್ಲಿ 278 ಪ್ರಯಾಣಿಕರು ಮೃತಪಟ್ಟು, ಸುಮಾರು 1200 ಜನರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವಂಸಕ ಕೃತ್ಯ ನಡೆದಿದೆ ಎಂಬ ರೈಲ್ವೆ ಮಂಡಳಿಯ ಶಿಫಾರಸಿನ ಮೇಲೆ ಸಿಬಿಐ ತನಿಖೆ ಆರಂಭಿಸಿದೆ.