ನವದೆಹಲಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ 50 ವೈದ್ಯಕೀಯ ಕಾಲೇಜುಗಳಿಗೆ ಅನುಮೋದನೆ ನೀಡಿದ್ದು, ಪದವಿ ಹಂತದಲ್ಲಿ ಹೆಚ್ಚುವರಿಯಾಗಿ 8,195 ಸೀಟುಗಳು ಸೇರ್ಪಡೆಯಾಗಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 'ಒಟ್ಟು ಸೀಟುಗಳ ಸಂಖ್ಯೆ 1,07,658ಕ್ಕೆ ಏರಲಿದೆ.

ಕರ್ನಾಟಕ, ತೆಲಂಗಾಣ, ರಾಜಸ್ಥಾನ, ತಮಿಳುನಾಡು, ಒಡಿಶಾ, ನಾಗಲ್ಯಾಂಡ್, ಮಹಾರಾಷ್ಟ್ರ, ಅಸ್ಸಾಂ, ಗುಜರಾತ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿ ಈ ಕಾಲೇಜುಗಳು ಅಸ್ತಿತ್ವಕ್ಕೆ ಬರಲಿವೆ.
ದೇಶದಾದ್ಯಂತ ಕಳೆದ ಎರಡೂವರೆ ತಿಂಗಳಲ್ಲಿ ನಿಗದಿತ ಗುಣಮಟ್ಟ ಕಾಯ್ದುಕೊಳ್ಳದ 38 ವೈದ್ಯ ಕಾಲೇಜುಗಳ ಅನುಮೋದನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಪದವಿ ವೈದ್ಯಕೀಯ ಶಿಕ್ಷಣ ಮಂಡಳಿಯು ಹಿಂಪಡೆದಿದೆ ಎಂದು ತಿಳಿಸಿದೆ.
ಅಲ್ಲದೆ, ಇನ್ನೂ 102 ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಈ ಪೈಕಿ 24 ಕಾಲೇಜುಗಳು ಎನ್‌ಎಂಸಿಗೆ ಮತ್ತು ಆರು ಕಾಲೇಜುಗಳು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.