ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಮಂಗಳವಾರ) 65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ರಾಷ್ಟ್ರಪತಿ ಅವರಿಗೆ ಪ್ರಧಾನಿ ಸೇರಿ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ರಾಷ್ಟ್ರಪತಿ ಅವರಿಗೆ ಜನ್ಮದಿನದ ಶುಭಾಶಯಗಳು.
ದ್ರೌಪದಿ ಮುರ್ಮು ಅವರು 20 ಜೂನ್ 1958ರಲ್ಲಿ ಒಡಿಶಾದ ಮಯೂರ್‌ಭಂಜ್‌ನ ಉಪರಬೆಡ ಗ್ರಾಮದಲ್ಲಿ ಜನಿಸಿದರು.
25 ಜುಲೈ 2022ರಂದು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಸ್ಥಾನಕ್ಕೇರಿದ ಮೊದಲ ಆದಿವಾಸಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.
'ದೇಶದ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು ಮತ್ತು ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಹಾರೈಸುತ್ತೇನೆ. ಶುಭವಾಗಲಿ' ಎಂದು ಟ್ವೀಟ್ ಮಾಡಿದ್ದಾರೆ.