ಪಿಥೋರಗಢ್: ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಗುರುವಾರ ಕಾರೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಥೋರಗಢ್: ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಗುರುವಾರ ಕಾರೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಥೋರಗಢದ ನಾಚ್ನಿಯ ಹೊಕಾರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಮೃತರು ಬಾಗೇಶ್ವರದ ನಿವಾಸಿಗಳಾಗಿದ್ದು, ದೇವಸ್ಥಾನಕ್ಕೆ ತೆರಳುತ್ತಿದ್ದರು. ದುರ್ಘಟನೆಯಲ್ಲಿ 8 ಮಂದಿ ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದ ಬಳಿಕವಷ್ಟೇ ಸಾವು ನೋವಿನ ನಿಖರ ಮಾಹಿತಿ ಲಭ್ಯವಾಗಲಿದೆ.ಎಂದು ಐಜಿ ಕುಮಾನ್ ನೀಲೇಶ್ ಆನಂದ್ ಭರ್ನೆ ಹೇಳಿದ್ದಾರೆ.
ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ಅಪಘಾತ ಸ್ಥಳಕ್ಕೆ ಧಾವಿಸಿವೆ. ಈ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಯಾತ್ರಾರ್ಥಿಗಳ ಸಾವಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದಾರೆ.