ಬದಿಯಡ್ಕ: ಹಿರಿಯ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಕಾಸರಗೋಡು ಜಿಲ್ಲೆಯಲ್ಲಿ ಬಿಜೆಪಿ ಬೆಳೆಯುತ್ತಾ ಬಂದಿದೆ. ಅವರ ತ್ಯಾಗ ಹೋರಾಟದ ಫಲವಾಗಿ ಇಂದು ಅನೇಕ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಟಿ.ರಮೇಶ್ ಹೇಳಿದರು.
ಬದಿಯಡ್ಕ ಸಂಸ್ಕøತಿ ಭವನದಲ್ಲಿ ಗುರುವಾರ ಸಂಜೆ ನರೇಂದ್ರ ಮೋದಿ ಸರ್ಕಾರದ 9ನೇ ವರ್ಷಾಚರಣೆ ಅಂಗವಾಗಿ ಹಿರಿಯ ಕಾರ್ಯಕರ್ತರನ್ನು ಶಾಲು ಹೊದೆಸಿ ಗೌರವಿಸಿ ಅವರು ಮಾತನಾಡಿದರು.
ಕಾರ್ಯಕರ್ತರು ಪಕ್ಷದ ಆಸ್ತಿ. ಅವರ ಎಲ್ಲಾ ನೋವು ನಲಿವುಗಳಿಗೆ ನಾವು ಒಗ್ಗಟ್ಟಿನಿಂದ ಸ್ಪಂದಿಸಬೇಕು ಎಂದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ರವೀಶ ತಂತ್ರಿ ಕುಂಟಾರು, ಬಿಜೆಪಿ ಉತ್ತರ ವಲಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ ಕಾಶಿನಾಥ, ಜಿಲ್ಲಾ ಉಪಾಧ್ಯಕ್ಷರುಗಳಾದ ಎಂ.ಪಿ. ರಾಮಪ್ಪ ಮಂಜೇಶ್ವರ, ಸುಧಾಮ ಗೋಸಾಡ, ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್.ಪಜ್ವ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರ ನಾಯ್ಕ್, ಕಾಸರಗೋಡು ಮಂಡಲ ಪ್ರಧಾನ ಕಾರ್ಯದರ್ಶಿ ಸುಕುಮಾರನ್ ಕುದ್ರೆಪ್ಪಾಡಿ, ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮುಂಡೋಳುಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್ ಸ್ವಾಗತಿಸಿ, ರೈತ ಮೋರ್ಚಾ ಮಂಡಲದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ವಂದಿಸಿದರು.