ಒಡಿಶಾ: ಗೂಡ್ಸ್ ರೈಲಿಗೆ ಕೋರಮಂಡಲ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಒಡಿಶಾದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಬಹನಾಗ ರೈಲು ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದ್ದು, ಎಕ್ಸ್ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿ ತಪ್ಪಿರುವುದಾಗಿ ವರದಿಯಾಗಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ರಭಸಕ್ಕೆ ಎಕ್ಸ್ ಪ್ರೆಸ್ ರೈಲಿನ ನಾಲ್ಕು ಬೋಗಿಗಳು ಉರುಳಿ ಬಿದ್ದಿವೆ.
ಈ ಬೋಗಿಗಗಳಲ್ಲಿ ಪ್ರಯಾಣಿಕರು ಇದ್ದರು ಎಂಬುದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಸಾವು-ನೋವಿನ ಕುರಿತು ಇನ್ನೂ ಸರಿಯಾದ ಮಾಹಿತಿ ತಿಳಿದುಬಂದಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ಕೆಲವರು ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅಪಘಾತ ಸ್ಥಳದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಹೆಚ್ಚುವರಿ ನೆರವಿನ ಅಗತ್ಯವಿದ್ದರೆ ತಿಳಿಸುವಂತೆ ಬಲಸೋರ್ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.