ಅಜಂಗಡ : ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

'ಈ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಬಳಿಕ ಸರ್ಕಾರ ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.
ಬ್ರಿಜ್ ಭೂಷಣ್ ಸಿಂಗ್ ಅವರನ್ನು ಫೆಡರೇಶನ್‌ನಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ಆಗ್ರಹಿಸಿ ದೇಶದ ಕೆಲ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಮತ್ತು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.