ಕೋಯಿಕ್ಕೋಡ್ : ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವುದಕ್ಕೆ ಸಂಬಂಧಿಸಿ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.
ಕೋಯಿಕ್ಕೋಡ್ : ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವುದಕ್ಕೆ ಸಂಬಂಧಿಸಿ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.
ಬುಧವಾರ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಹಾಗೂ ವಿವಿಪ್ಯಾಟ್ ಯಂತ್ರಗಳ ಪರಿಶೀಲನೆ ಕಾರ್ಯ ನಡೆಸಿದ ಜಿಲ್ಲಾಡಳಿತ, ಈ ಕುರಿತು ಎಲ್ಲ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿತ್ತು ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಉಪಚುನಾವಣೆ ನಡೆಸಲು ಉದ್ದೇಶಿಸಿರುವ ಆಯೋಗದ ಕ್ರಮವನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿದೆ.
ಮಾನಹಾನಿ ಪ್ರಕರಣವೊಂದರಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೂರತ್ ನ್ಯಾಯಾಲಯ ಮಾರ್ಚ್ 23ರಂದು ತೀರ್ಪು ನೀಡಿತ್ತು. ಮಾರನೇ ದಿನವೇ ಲೋಕಸಭಾ ಸಚಿವಾಲಯವು ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.
ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಇದನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಗುಜರಾತ್ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.