ಕಾಸರಗೋಡು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಗುರುವಾರ ಕಾಸರಗೋಡು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಆಚರಿಸಿಕೊಂಡರು. ಬುಧವಾರ ರಾತ್ರಿಯಿಂದಲೇ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಆರಂಭಗೊಂಡಿತ್ತು.
ಕಾಸರಗೋಡು ತಳಂಗರೆ ಮಾಲಿಕ್‍ದೀನಾರ್ ಮಸೀದಿ, ನೆಲ್ಲಿಕುಂಜೆ ಮುಹಿಯುದ್ದೀನ್ ಜುಮಾ ಮಸೀದಿ, ನಾಯಮರ್‍ಮೂಲೆ ಸೇರಿದಂತೆ ವಿವಿಧೆಡೆ ಮಸೀದಿಗಳಲ್ಲಿ ಗುರುವಾರ ವಿಶೇಷ ಪ್ರಾರ್ಥನೆ ನಡೆಯಿತು. ಹೊಸಬಟ್ಟೆ ಧರಿಸಿ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ನಂತರ ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗನದೊಂದಿಗೆ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಬೆಳಗ್ಗೆ ಬಿರುಸಿನ ಮಳೆಯದರೂ, ನಂತರ ಮಳೆ ಪ್ರಮಾಣ ಕಡಿಮೆಯಾಗಿತ್ತು. ಇದರಿಂದ ಮನೆಗಳಿಗೆ ತೆರಳಿ ಶುಭಾಶಯ ವಿನಿಮಯ ಮಾಡಿಕೊಳ್ಳುವವರಿಗೆ ವರದಾನವಾಗಿತ್ತು.
ನೆಲ್ಲಿಕುಂಜೆ ಮುಹಿಯುದ್ದೀನ್ ಮಸೀದಿ ಎದುರು ಹಸ್ತಲಾಘವದೊಂದಿಗೆ ಬಾಲಕರಿಬ್ಬರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
: ಕಾಸರಗೋಡು ನೆಲ್ಲಿಕುಂಜೆ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು.
: