ನವದೆಹಲಿ: ಭಾರತವು ಪ್ರಜಾಪ್ರಭುತ್ವ, ಧಾರ್ಮಿಕ ಸ್ವಾತಂತ್ರ್ಯ, ವಿಶ್ವ ಶಾಂತಿಯಂತಹ ಸಾರ್ವತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
ನವದೆಹಲಿ: ಭಾರತವು ಪ್ರಜಾಪ್ರಭುತ್ವ, ಧಾರ್ಮಿಕ ಸ್ವಾತಂತ್ರ್ಯ, ವಿಶ್ವ ಶಾಂತಿಯಂತಹ ಸಾರ್ವತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
'ದೊಡ್ಡಶಕ್ತಿಯೊಂದಿಗೆ ದೊಡ್ಡ ಜವಾಬ್ದಾರಿ ಬರುತ್ತದೆ' ಎಂಬ ಹಾಲಿವುಡ್‌ನ ಜನಪ್ರಿಯ ಸಿನಿಮಾ 'ಸ್ಪೈಡರ್ ಮ್ಯಾನ್'ನ ಸಂಭಾಷಣೆಯನ್ನು ಉಲ್ಲೇಖಿಸಿದ ಅವರು, ಏರುತ್ತಿರುವ ಜಾಗತಿಕ ಸ್ಥಾನಮಾನದೊಂದಿಗೆ ಭಾರತದ ಜವಾಬ್ದಾರಿಯೂ ಹೆಚ್ಚುತ್ತಿದೆ ಎಂದಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ಸರ್ಕಾರವು ಕಾರ್ಯಪ್ರವೃತ್ತವಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಆರ್ಥಿಕ ನಕ್ಷೆಯಲ್ಲಿ ತನ್ನ ಸ್ಥಾನವನ್ನು ಮರಳಿ ಪಡೆಯುತ್ತಿದೆ ಎಂದೂ ಬಣ್ಣಿಸಿದರು.
ಉನ್ನತ ಜೀವನಮಟ್ಟ, ಸಾಮಾಜಿಕ ಸಾಮರಸ್ಯ, ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಮಹಿಳೆಯರ ಸಮಾನ ಸಹಭಾಗಿತ್ವವಿರುವ ದೇಶವನ್ನು ರೂಪಿಸುವ ಅಗತ್ಯದ ಕುರಿತು ಅವರು ಬಲವಾಗಿ ಪ್ರತಿಪಾದಿಸಿದರು.
ಯಾವುದೇ ತಾರತಮ್ಯವಿಲ್ಲದೆ ಭಾರತೀಯರೆಲ್ಲರೂ ಜತೆಯಾಗಿ ದೇಶ ಕಟ್ಟುವ ಕೆಲಸದಲ್ಲಿ ತೊಡಗಬೇಕು ಎಂದೂ ಕರೆ ನೀಡಿದರು.