ಭುವನೇಶ್ವರ: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭುವನೇಶ್ವರ: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಒಡಿಶಾದ ಬೆರ್ಹಾಂಪುರ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ರೈಲ್ವೆ ಪೊಲೀಸರು ಪ್ರಯಾಣಿಕರನ್ನು ಇಳಿಸಿದ್ದಾರೆ.
ರೈಲಿನ ಬಿ-5 ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.
ಕಳೆದ ನಾಲ್ಕು ದಿನಗಳ ಹಿಂದೆ ಒಡಿಶಾದಲ್ಲಿ ಸಂಭವಿಸಿದ ಮೂರು ರೈಲುಗಳ ಅಪಘಾತದಲ್ಲಿ 278 ಜನರು ಮೃತಪಟ್ಟು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.