ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಶಾಲೆಯ 2023 - 24ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಗುರುವಾರ ನಡೆಯಿತು. ಪ್ರವೇಶೋತ್ಸವದ ಅಂಗವಾಗಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ ದೀಪ ಪ್ರಜ್ವಲನಗೈದು ಉದ್ಘಾಟಿಸಿದರು. ಸದಸ್ಯೆ ರುಕ್ಯ ಸಿದ್ದಿಕ್, ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ., ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಾಮೋದರ ಮಾಸ್ತರ್, ಮಾತೃ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸೌಮ್ಯಪ್ರಕಾಶ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಅಬೂಬಕ್ಕರ್ ಸಿದ್ದಿಕ್, ಎಂಪಿಟಿಎ ಉಪಾಧ್ಯಕ್ಷೆ ಸ್ವಪ್ನ ಉಪಸ್ಥಿತರಿದ್ದು ಶುಭಹಾರೈಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಪ್ರಸಾದ್ ಅಧ್ಯಕ್ಷತೆ ವಹಿಸಿ ಪ್ರವೇಶೋತ್ಸವ ಶುಭ ಹಾರೈಕೆಗಳನ್ನು ನೀಡಿದರು. ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ಹಿರಿಯ ಅಧ್ಯಾಪಕ ನಾರಾಯಣ ನಾವುಡ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ಅಧ್ಯಾಪಕ ಕೃಷ್ಣಶರ್ಮ.ಕೆ ಕಾರ್ಯಕ್ರಮವನ್ನು ನಿರೂಪಿಸಿದರು.
ರಾಜ್ಯಮಟ್ಟದಲ್ಲಿ ನಡೆದ ಪ್ರವೇಶೋತ್ಸವದ ವಿಡಿಯೋ ಪ್ರದರ್ಶನ ಜರಗಿತು. ವಿದ್ಯಾರ್ಥಿಗಳ ಹೆತ್ತವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.