ನವದೆಹಲಿ: ಹೊಸ ಸಂಸತ್ ಭವನವು ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಅಭಿವೃದ್ಧಿಯ ಬಗ್ಗೆ ಹೊಂದಿರುವ ದೃಢವಾದ ಬದ್ಧತೆಯ ಸಂಕೇತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ನವದೆಹಲಿ: ಹೊಸ ಸಂಸತ್ ಭವನವು ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಅಭಿವೃದ್ಧಿಯ ಬಗ್ಗೆ ಹೊಂದಿರುವ ದೃಢವಾದ ಬದ್ಧತೆಯ ಸಂಕೇತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ದೆಹಲಿಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಯೋಜಿಸಿದ್ದ 'ಸಂಪರ್ಕ ಸೇ ಸಮರ್ಥನ್' ಅಭಿಯಾನದ ಭಾಗವಾಗಿ ವೈದ್ಯರು, ಸರ್ಕಾರಿ ನೌಕರರು, ಸಾಮಾಜಿಕ ಸಂಘಟನೆಗಳ ಸದಸ್ಯರು ಮತ್ತು ಯುವಕರೊಂದಿಗೆ ಜೈಶಂಕರ್ ಸಂವಾದ ನಡೆಸಿದರು.
ಯುವಕರು ಭಾರತದ ಪ್ರಗತಿಗೆ ಗಣನೀಯ ಕೊಡುಗೆ ನೀಡಬೇಕು. ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಭಾಗವಹಿಸಬೇಕು ಮತ್ತು ರಾಜಕೀಯದಲ್ಲಿ ಬದಲಾವಣೆ ತರಲು ಸಹಕರಿಸಬೇಕು ಎಂದು ದೆಹಲಿ ವಿಶ್ವವಿದ್ಯಾನಿಲಯದ(ಡಿಯು) ವಿದ್ಯಾರ್ಥಿಗಳಿಗೆ ಜೈಶಂಕರ್ ಕರೆ ನೀಡಿದರು.
ಹೊಸದಾಗಿ ನಿರ್ಮಿಸಲಾದ ಸಂಸತ್ ಭವನ ಮತ್ತು ಪುನರಾಭಿವೃದ್ಧಿ ಮಾಡಿದ ಪ್ರಗತಿ ಮೈದಾನದ ಬಗ್ಗೆ ಪ್ರಸ್ತಾಪಿಸಿದ ಜೈಶಂಕರ್, ಇವೆರಡೂ 'ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಅಭಿವೃದ್ಧಿಯ ಬಗ್ಗೆ ಹೊಂದಿರುವ ದೃಢವಾದ ಬದ್ಧತೆಯ ಸಂಕೇತವಾಗಿವೆ' ಎಂದು ಹೇಳಿದರು.
ಕಳೆದ ಒಂಬತ್ತು ವರ್ಷಗಳ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಿಜೆಪಿಯು ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ.