HEALTH TIPS

ಓದುವುದರಿಂದ ಜ್ಞಾನ ಭಂಡಾರ ವೃದ್ಧಿ: ಮಧುಸೂದನ ಆಯರ್: ಪಾಂಚಜನ್ಯ ಗ್ರಂಥಾಲಯ ಮತ್ತು ವಾಚನಾಲಯದ ಉದ್ಘಾಟನೆ


                ಬದಿಯಡ್ಕ: ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರವು ಹಲವಾರು ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿದ್ದು, ಸಾಮಾಜಿಕ ಕಳಕಳಿಯೊಂದಿಗೆ ಸಮಾಜಕ್ಕೆ ದೊಡ್ಡ ಉಡುಗೊರೆಯನ್ನು ನೀಡಿದೆ. ಪುಸ್ತಕಗಳು ಮನುಷ್ಯನನ್ನು ತಲೆಯೆತ್ತುವಂತೆ ಮಾಡುತ್ತದೆ. ಪುಸ್ತಕಗಳ ಓದಿನ ಮೂಲಕ ತಮ್ಮ ಜ್ಞಾನ ಭಂಡಾರವನ್ನು ವೃದ್ಧಿಸಿಕೊಳ್ಳಲು ಎಲ್ಲರೂ ಮುಂದೆ ಬರಬೇಕಾಗಿದೆ ಎಂದು ಉದ್ಯಮಿ, ದಾನಿ ಮಧುಸೂದನ ಆಯರ್ ಮಂಗಳೂರು ಹೇಳಿದರು. 

           ಅಗಲ್ಪಾಡಿ ಜಯನಗರ ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯ ಹಾಗೂ ವಾಚನಾಲಯದ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು.

           ಕುಂಬ್ಡಾಜೆ ಗ್ರಾಮಪಂಚಾಯತಿ ಅಧ್ಯಕ್ಷ ಹಮೀದ್ ಪೊಸಳಿಗೆ ವಾಚನಾಲಯವನ್ನು ಉದ್ಘಾಟಿಸಿದರು. ಗ್ರಂಥಾಲಯದ ಗೌರವಾಧ್ಯಕ್ಷ ಬಾಬು ಮಾಸ್ತರ್ ಅಗಲ್ಪಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಕ್ಷ ಅಚ್ಯುತ ಮಾಸ್ತರ್ ಅಗಲ್ಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಪ್ರಶಸ್ತಿ ವಿಜೇತೆ ಗ್ರಂಥಾಲಯ ಮೇಲ್ವಿಚಾರಕಿ ಮಂಡೆಕೋಲು ಸಾವಿತ್ರಿ ಕಣಿಮರಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

          ರಾಜ್ಯಪ್ರಶಸ್ತಿ ವಿಜೇತ ಚಲನಚಿತ್ರ ನಟ, ರಂಗಭೂಮಿ ಶಿಕ್ಷಕ ಸದಾಶವ ರೈ ನೀನಾಸಂ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಉಬ್ರಂಗಳ ಶ್ರೀ ಮಹಾದೇವ ಪಾರ್ವತೀ ಶ್ರೀ ಶಾಸ್ತಾರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ ಕಿಶೋರ್ ಕುಣಿಕುಳ್ಳಾಯ, ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ, ಮವ್ವಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮೊಕ್ತೇಸರ ವಕೀಲ ನಾರಾಯಣ ಭಟ್, ಕುಂಬ್ಡಾಜೆ ಗ್ರಾಮಪಂಚಾಯಿತಿ ವಾರ್ಡು ಸದಸ್ಯ ಹರೀಶ್ ಗೋಸಾಡ, ಮವ್ವಾರು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಕಾಸರಗೋಡು ಸರ್ಕಾರಿ ಕಾಲೇಜಿನ ನಿವೃತ್ತ ಪಾಚಾರ್ಯ ಪ್ರೊ.ಎ.ಶ್ರೀನಾಥ್ ಕೊಲ್ಲಂಗಾನ, ಗಂಗಾಧರ ಮಾಸ್ತರ್ ಮರಿಕ್ಕಾನ ಮಾತನಾಡಿದರು. ನರಸಿಂಹ ಭಟ್ ಕಟ್ಟದಮೂಲೆ, ಚಂದ್ರಶೇಖರ ಭಟ್ ಏತಡ್ಕ ಶುಭಹಾರೈಸಿದರು. ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷೆ ವಸಂತಿ ಟೀಚರ್ ಅಗಲ್ಪಾಡಿ, ಅಗಲ್ಪಾಡಿ ಯಾದವ ಸೇವಾಸಂಘದ ಅಧ್ಯಕ್ಷ ಸುಧಾಮ ಪದ್ಮಾರು ಉಪಸ್ಥಿತರಿದ್ದರು. ಪಾಂಚಜನ್ಯ ಬಾಲಗೋಕುಲದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯದ ಸಂಚಾಲಕ ರಾಜೇಶ್ ಮಾಸ್ತರ್ ಅಗಲ್ಪಾಡಿ ಸ್ವಾಗತಿಸಿ, ಸಹಸಂಚಾಲಕ ಉದಯ ಕುಮಾರ್ ಕಲ್ಲಕಟ್ಟ ವಂದಿಸಿದರು.ಪ್ರಧಾನ ಸಂಚಾಲಕ ರಮೇಶ್ ಕೃಷ್ಣ ಪದ್ಮಾರು ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries