ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಶಾಲಾ ಪ್ರವೇಶೋತ್ಸವ ಗುರುವಾರ ಮಂಜೇಶ್ವರ ಸರ್ಕಾರಿ ವೆಲ್ಪೇರ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಸಕ ಎಕೆಎಂ ಅಶ್ರಫ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಶಾಲೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ 10 ಲಕ್ಷ ರೂ.ಅನುಮೋದಿಸುವುದಾಗಿ ಭರವಸೆ ನೀಡಿದರು.
ಮಂಜೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷೆ ಜೀನ್ ಲವೀನಾ ಮೊಂತೆರೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್, ಜಿಲ್ಲಾ ಪಂಚಾಯತಿ ಸದಸ್ಯ ಗೋಲ್ಡನ್ ಅಬ್ದುಲ್ ರಹ್ಮಾನ್, ಮಂಜೇಶ್ವರ ಬ್ಲಾಕ್ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಂಶೀನಾ, ಎಸ್ ಎಸ್ ಎ ಜಿಲ್ಲಾ ನಿರೂಪಣಾಧಿಕಾರಿ ಡಿ.ನಾರಾಯಣ, ಮಂಜೇಶ್ವರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಹಮ್ಮದ್ ಸಿದ್ದೀಕ್, ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಪ್ರಿಯಾ ಶೆಣೈ, ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಯಾದವ್ ಬಡಾಜೆ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ವಿ.ದಿನೇಶ, ಬಿಆರ್ಸಿ ನಿರೂಪಣಾಧಿಕಾರಿ ಪಿ.ವಿಜಯ ಕುಮಾರ್, ಮಂಜೇಶ್ವರ ಸಿಐ ಸಂತೋμï ಕುಮಾರ್, ಮಂಜೇಶ್ವರ ಗ್ರಾ.ಪಂ ಸದಸ್ಯ ರಾಜೇಶ್, ಬಿ.ಆರ್.ಸಿ. ತರಬೇತುದಾರ ಜಾಯ್, ನಿವೃತ್ತ ಶಿಕ್ಷಕರಾದ ಎಂ.ಜಯಂತ, ಸೀನಾ ಮರ್ಯಮ್, ಶಿಕ್ಷಣ ತಜ್ಞ ಯು.ಪುರುμÉೂೀತ್ತಮ ದಾಸ್ ಮತ್ತಿತರರು ಉಪಸ್ಥಿತರಿದ್ದರು. ಜಿ.ಡಬ್ಲ್ಯೂ.ಎಲ್.ಪಿ.ಎಸ್ ಶಾಲೆಯ ಮುಖ್ಯ ಶಿಕ್ಷಕ ಎ.ಸುಕೇಶ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಸೋನಿಯಾ ಜ್ಯೋತಿ ವಂದಿಸಿದರು.