ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಹಾಗೂ ವಿನೇಶಾ ಪೋಗಟ್ ಅವರು ಸೋಮವಾರ ಕೆಲಸಕ್ಕೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಹಾಗೂ ವಿನೇಶಾ ಪೋಗಟ್ ಅವರು ಸೋಮವಾರ ಕೆಲಸಕ್ಕೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.
ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದು ತಮ್ಮ ಕೆಲಸಕ್ಕೆ ವರದಿ ಮಾಡಿಕೊಂಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ
ಆದರೆ, ಇದಕ್ಕೂ ಕೆಲಹೊತ್ತಿನ ಮುನ್ನ ಸಾಕ್ಷಿ ಮಲಿಕ್ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ವದಂತಿ ಎದ್ದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಸಾಕ್ಷಿ ಮಲಿಕ್, 'ಈ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ. ಪ್ರತಿಭಟನೆ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದೇ ರೀತಿ ಇತರ ಕುಸ್ತಿಪಟುಗಳು ಹೇಳಿದ್ದಾರೆ.
ಇದಕ್ಕೂ ಮುನ್ನ ಒಲಿಪಿಂಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶಾ ಫೊಗಟ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬ್ರಿಜ್‌ಭೂಷಣ್ ವಿರುದ್ಧದ ಪ್ರತಿಭಟನೆ ಕುರಿತಂತೆ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ ಅವರು ಕೆಲಸಕ್ಕೆ ಮರಳುತ್ತಿದ್ದಾರೆ.
ಏಪ್ರಿಲ್‌ನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕುಸ್ತಿ ಪಟುಗಳ ಪ್ರತಿಭಟನೆಯ ನೇತೃತ್ವವನ್ನು ಈ ಮೂರೂ ಕುಸ್ತಿಪಟುಗಳು ವಹಿಸಿದ್ದರು. ಅಪ್ರಾಪ್ತೆ ಸೇರಿದಂತೆ ಹಲವು ಕುಸ್ತಿ ಪಟುಗಳಿಗೆ ಬ್ರಿಜ್‌ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದು ಪ್ರತಿಭಟನಾನಿರತರ ಆರೋಪವಾಗಿದೆ.
ಮೇ 28 ರಂದು ಜಂತರ್ ಮಂತರ್‌ನಿಂದ ಪ್ರತಿಭಟನಾಕಾರರನ್ನು ಹೊರಗೆ ಹಾಕಿರುವ ದೆಹಲಿ ಪೊಲೀಸರು, ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.