ಕೇರಳ ಅರಣ್ಯ ಮತ್ತು ವನ್ಯಜೀವಿ ಇಲಾಖೆ, ಸಾಮಾಜಿಕ ಅರಣ್ಯ ವಿಭಾಗ ಕಾಸರಗೋಡು, ವಲಿಯಪರಂಬ ಗ್ರಾಮ ಪಂಚಾಯಿತಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಗಿ ಜೂ. 5ರಂದು ವೃಕ್ಷಸಮೃದ್ಧಿ ಕಾಂಡ್ಲಾ ಯೊಜನೆಯನ್ನು ಆಯೋಜಿಸಲಿದೆ. ಅಂದು ಬೆಳಗ್ಗೆ 9.30ಕ್ಕೆ ಮಾಡಕ್ಕಲ್ನಲ್ಲಿ ನಡೆಯಲಿರುವ ವೃಕ್ಷಸಮೃದ್ಧಿ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಶಾಸಕ ಎಂ.ರಾಜಗೋಪಾಲನ್ ನೆರವೇರಿಸುವರು. ಕಾಂಡ್ಲಾ ಅರಂಭ್ಯ ಯೋಜನೆಯನ್ನು ಸಂಸದ ರಾಜಮೋಹನ್ ಉಣ್ಣಿತ್ತಾನ್ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಲಿಯಪರಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ವಿ.ಸಜೀವನ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಅಂಗವಾಘಿ ಮಾಡಕ್ಕಲ್ ನದಿ ದಡದಲ್ಲಿ ಮ್ಯಾಂಗ್ರೋವ್ ಗಿಡಗಳನ್ನು ನೆಡಲಾಗುವುದು.