ಉನಾ: ರಾಜ್ಯದಲ್ಲಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಶನಿವಾರ ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಮಾದಕ ವ್ಯಸನದ ವಿರುದ್ದ ಪಾದಯಾತ್ರೆ: ಡಿಸಿಎಂ ಮುಖೇಶ್ ಅಗ್ನಿಹೋತ್ರಿ
0
ಜೂನ್ 24, 2023
Tags
ಉನಾ: ರಾಜ್ಯದಲ್ಲಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಶನಿವಾರ ಹೇಳಿದ್ದಾರೆ.
ಜೂನ್ 27ರಂದು ಹರೋಲಿಯಿಂದ ಕಂಗರ್ ವರೆಗೆ ಮಾದಕ ವಸ್ತುಗಳ ವಿರುದ್ದ 8 ಕಿಲೋಮೀಟರ್ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರು ಚಾಲನೆ ನೀಡಲಿದ್ದಾರೆ ಎಂದು ಅಗ್ನಿಹೋತ್ರಿ ತಿಳಿಸಿದ್ದಾರೆ.
ಮಾದಕ ವಸ್ತು ಕಳ್ಳ ಸಾಗಣಿಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒತ್ತಡ ಹೇರದಂತೆ ರಾಜಕೀಯ ಮುಖಂಡರಿಗೆ ಕರೆ ನೀಡಿದ್ದಾರೆ. ಗಡಿ ಜಿಲ್ಲೆಯಾದ ಉನಾ, ಮಾದಕ ವಸ್ತುಗಳ ಕಳ್ಳ ಸಾಗಣಿಕೆಗೆ ತುತ್ತಾಗುತ್ತಿದೆ, ಈ ಪಾದಯಾತ್ರೆ ಮಹತ್ವ ಪಡೆದುಕೊಂಡಿದೆ ಎಂದು ಅಗ್ನಿಹೋತ್ರಿ ಹೇಳಿದ್ದಾರೆ.
ಈ ಕಾರ್ಯಕ್ರಮವು ' ಜೀವನಕ್ಕಾಗಿ ನಡಿಗೆ- ಮಾದಕ ವ್ಯಸನದ ವಿರುದ್ದ' ಎಂಬ ಘೋಷವಾಕ್ಯದಡಿ ರೂಪುಗೊಂಡಿದೆ. ಈ ಪಾದಯಾತ್ರೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ವಿವಿಧ ಸಂಸ್ಥೆಗಳು ಮತ್ತು ಸಮಾಜದ ವಿವಿಧ ವರ್ಗಗಳ ಜನರು ಭಾಗವಾಗಲಿದ್ದಾರೆ ಎಂದು ಅಗ್ನಿಹೋತ್ರಿ ಮಾಹಿತಿ ನೀಡಿದ್ದಾರೆ.