ಪಾಲಕ್ಕಾಡ್: ಪಾಲಕ್ಕಾಡ್ ಮುನ್ಸಿಪಲ್ ಕಾರ್ಪೋರೇಷನ್ ಅಳವಡಿಸಿದ ಸ್ಯಾನಿಟರಿ ನ್ಯಾಪ್ಕಿನ್ ಡೆಸ್ಟ್ರಾಯರ್ ಮಾದರಿಯನ್ನು ರಾಜ್ಯ ಮಟ್ಟದಲ್ಲಿ ಹಂತ ಹಂತವಾಗಿ ಸಮುದಾಯ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಇವುಗಳನ್ನು ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಲಾಗುವುದು.
ಜೂ.16,17 ರಂದು ತಿರುವನಂತಪುರದಲ್ಲಿ ನಡೆದ ಮಾಲಿನ್ಯಮುಕ್ತ ನವಕೇರಳ ಕ್ಯಾಂಪೈನ್ ನಲ್ಲಿ ರಾಜ್ಯಾದ್ಯಂತ ಇತರ ಸ್ಥಳೀಯಾಡಳಿತ ಸಂಸ್ಥೆಗಳು ಇದೇ ಮಾದರಿಯ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸ್ಥಳೀಯಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗಳು ಸಹ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.
ಪಾಲಕ್ಕಾಡ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಸ್ತೃತ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿದೆ. ಇದು ರಾಜ್ಯದ ಮೊದಲ ಯೋಜನೆಯಾಗಿದ್ದರಿಂದ ಮತ್ತು ಹಲವು ಇಲಾಖೆಗಳ ಅನುಮೋದನೆ ಪಡೆಯಬೇಕಾಗಿರುವುದರಿಂದ ಪಾಲಕ್ಕಾಡ್ ಮುನ್ಸಿಪಲ್ ಕಾರ್ಪೋರೇಷನ್ ಸಾಕಷ್ಟು ಪ್ರಯತ್ನದಿಂದ ಯೋಜನೆಯನ್ನು ಪೂರ್ಣಗೊಳಿಸಿತು.