ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಯೋಗದಿನಾಚರಣೆ ನಡೆಯಿತು. ಸಾಹಿತಿ, ಹವ್ಯಾಸಿ ಪತ್ರಕರ್ತ ಚಂದ್ರಶೇಖರ ಏತಡ್ಕ ಉದ್ಘಾಟಿಸಿ ಮಾತನಾಡಿ, ಮನುಷ್ಯರಾದ ನಮ್ಮ ಜೀವನ ಸರಿಯಾಗಿರಬೇಕಿದ್ದರೆ ಯೋಗ ನಮ್ಮೊಂದಿಗಿರಬೇಕು. ಧ್ಯಾನದ ಮೂಲಕ ದೇವರನ್ನು ಮೆಚ್ಚಿಸಿದರೆ ಯೋಗದ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದರು.
ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೆಮಾರ್ಗ ಸ್ವಾಗತಿಸಿ, ಅಧ್ಯಾಪಕ ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.