ಬದಿಯಡ್ಕ: ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಶ್ರೀದೇವರ ಬಾಲಾಲಯ ಪ್ರತಿಷ್ಠೆ ಬುಧವಾರ ನಡೆಯಿತು.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಶ್ರೀದೇವರಿಗೆ ಕಲಶಾಭಿಷೇಕ ನೆರವೇರಿಸಿದರು. 10.20ರಿಂದ 11.10ರ ಸಿಂಹಲಗ್ನ ಸುಮುಹೂರ್ತದಲ್ಲಿ ಶ್ರೀ ಮಹಾವಿಷ್ಣು ದೇವರ ಬಾಲಾಲಯ ಪ್ರತಿಷ್ಠೆಯನ್ನು ನೆರವೇರಿಸಿ ಗೋಮಾತೆಯ ದರ್ಶನದೊಂದಿಗೆ ಜೀವಕಲಶಾಭಿಷೇಕ ನಡೆಯಿತು. ಬೆಳಗ್ಗೆ ಗಣಪತಿಹೋಮ, ಪ್ರತಿಷ್ಠಾಪಾಣಿ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು. ಊರಪರವೂರ ಭಗವದ್ಭಕ್ತರು ಪಾಲ್ಗೊಂಡಿದ್ದರು. ಜೂ.25ರಂದು ಶ್ರೀಕ್ಷೇತ್ರದಲ್ಲಿ ಜೀರ್ಣೋದ್ಧಾರ ಕಾರ್ಯಕ್ಕಾಗಿ ಮಹಾಶ್ರಮದಾನ ನಡೆಯಲಿರುವುದು.