ಬಿಹಾರ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಲು ವಿರೋಧಪಕ್ಷಗಳ ನಾಯಕರು ಶುಕ್ರವಾರ ನಡೆಸುವ ಚಿಂತನ ಶಿಬಿರದಲ್ಲಿ ಬಿಎಸ್‌ಪಿ ಪಕ್ಷ ಭಾಗವಹಿಸುವುದಿಲ್ಲ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಬಿಹಾರ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಲು ವಿರೋಧಪಕ್ಷಗಳ ನಾಯಕರು ಶುಕ್ರವಾರ ನಡೆಸುವ ಚಿಂತನ ಶಿಬಿರದಲ್ಲಿ ಬಿಎಸ್‌ಪಿ ಪಕ್ಷ ಭಾಗವಹಿಸುವುದಿಲ್ಲ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಹಣದುಬ್ಬರ, ಬಡತನ, ನಿರುದ್ಯೋಗ, ಅನಕ್ಷರತೆ, ಜಾತಿ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ನರಳುತ್ತಿರುವ ದೇಶದ ಸ್ಥಿತಿ ನೋಡಿದರೆ ಅಂಬೇಡ್ಕರ್ ಅವರ ಸಮಾನತೆಯ ಸಂವಿಧಾನ ಸರಿಯಾಗಿ ಅನುಷ್ಠಾನಗೊಳಿಸುವ ಸಾಮರ್ಥ್ಯ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.
ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ವಿರೋಧ ಪಕ್ಷದ ನಾಯಕರ ಸಭೆಯು ದಿಲ್ ಮಿಲೇ ನಾ ಮಿಲೇ ಹಾಥ್ ಮಿಲಾತೇ ರಹೀಯೇ (ಯೋಚನೆಗಳು ಒಂದೇ ಇರದಿದ್ದರೂ, ಕೈಕುಲುಕುತ್ತಲೇ ಇರಿ) ಎಂಬ ನುಡಿಗಟ್ಟನ್ನು ನೆನಪಿಸುತ್ತದೆ ಎಂದಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ನಡೆಸುತ್ತಿರುವ ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಸೊರೇನ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಉದ್ಧವ ಠಾಕ್ರೆ, ಎನ್‌ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ಇತರೆ ಮುಖಂಡರು ಭಾಗವಹಿಸುವ ನಿರೀಕ್ಷೆ ಇದೆ.