ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾನಂದ ಎಯುಪಿ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ಹೊಸತಾಗಿ 1ನೇ ತರಗತಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ರ್ಯಕ್ರಮ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.
ಆರಂಭದಲ್ಲಿ ರಾಜ್ಯ ಮಟ್ಟದ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮದ ನೇರ ಪ್ರಸಾರವನ್ನು ಮಕ್ಕಳಿಗೆ ತೋರಿಸಲಾಯಿತು.ಬಳಿಕ ನವಾಗತ ಮಕ್ಕಳನ್ನು ಮೆರವಣಿಗೆಯ ಮೂಲಕ ಶಾಲೆಗೆ ಕರೆತರಲಾಯಿತು.ಶಾಲಾ ವ್ಯವಸ್ಥಾಪಕ ಹೃಷಿಕೇಶ ವಿ.ಎಸ್. ದೀಪ ಬೆಳಗಿಸಿ ಪ್ರವೇಶೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು. ಅನಿವಾಸಿ ಭಾರತೀಯ ಸ್ವರ್ಗ ಶಾಲೆಯ ಹಳೆ ವಿದ್ಯಾರ್ಥಿ ಪ್ರಸನ್ನಕುಮಾರ್ ವಿ.ಎಸ್.ಕೊಡುಗೆಯಾಗಿ ನೀಡಿದ ಬ್ಯಾಗ್ , ಪುಸ್ತಕ ಮತ್ತು ಇನ್ನಿತರ ಕಲೀಕೋಪಕರಣಗಳನ್ನು 1ನೇ ತರಗತಿಯ ಮಕ್ಕಳಿಗೆ ವಿತರಿಸಲಾಯಿತು.
ವಾರ್ಡ್ ಸದಸ್ಯ ರಾಮಚಂದ್ರ ಎಂ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ಪಿ.ಕೆ., ಮಾತೃ ಸಂಘದ ಅಧ್ಯಕ್ಷೆ ದಿವ್ಯಾ ಎಸ್. ಶುಭ ಹಾರೈಸಿದರು.ಮುಖ್ಯ ಶಿಕ್ಷಕಿ ಗೀತಾಕುಮಾರಿ ಸ್ವಾಗತಿಸಿದರು.ಶಿಕ್ಷಕ ವೆಂಕಟ ವಿದ್ಯಾಸಾಗರ್ ವಂದಿಸಿದರು.ಹಿರಿಯ ಶಿಕ್ಷಕ ಸಚ್ಚಿದಾನಂದ ಮೊಗೇರು ನಿರೂಪಿಸಿದರು.ರಕ್ಷಕರು, ಶಿಕ್ಷಕರು ಹಾಗೂ ಊರವರು ಉಪಸ್ಥಿತರಿದ್ದರು. ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸಿಹಿತಿಂಡಿ ಹಾಗೂ ಮಧ್ಯಾಹ್ನದ ಊಟದ ವೇಳೆ ಪಾಯಸ ವಿತರಣೆ ನಡೆಯಿತು.