ಕಾಸರಗೋಡು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಲ್ ಕೇರಳ ಪೋಟೋಗ್ರರ್ಸ್‍ಅಸೋಸಿಯೇಷನ್ ಕಾಸರಗೋಡು ವೆಸ್ಟ್‍ಯೂನಿಟ್ ವತಿಯಿಂದ ಕಾಸರಗೋಡು ಸರ್ಕಾರಿ ಪ್ರೌಡಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು.
ಕಾಸರಗೋಡು ನಗರಸಭಾ ಅಧ್ಯಕ್ಷ, ವಕೀಲ ವಿ.ಎಂ. ಮುನೀರ್ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಯೂನಿಟ್ ಅಧ್ಯಕ್ಷ ರತೀಷ್ ರಾಮು ವಿಡಿಯೋ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ವಲಯ ಕಾರ್ಯದರ್ಶಿ ಚಂದ್ರಶೇಖರ, ಯೂನಿಟ್ ಉಪಾಧ್ಯಕ್ಷರಾದ ಗಣೇಶ್ ರೈ, ಯೂನಿಟ್ ಕೋಶಾಧಿಕಾರಿ ಅಮಿತ್, ಯೂನಿಟ್‍ಸದಸ್ಯ ಮನು ಎಲ್ಲೋರ ಹಾಗೂ ಯುನಿಟ್ ಪದಾಧಿಕಾರಿಗಳು, ಶಾಲಾ ಸ್ಟೂಡೆಂಟ್ ಪೊಲೀಸ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯೂನಿಟ್ ಕಾರ್ಯದರ್ಶಿ ವಸಂತ್ ಕೆರೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ವಿಶಾಖ್ ವಂದಿಸಿದರು.